ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಪ್ರಶಂಸೆ ವ್ಯಕ್ತಪಡಿಸಿದರು.
ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್. ಚಂದ್ರಶೇಖರ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು